ನ್ಯೂಸ್

ಜಿಪಂ ಸಿಇಒ ರುಚಿ ಬಿಂದಾಲ್​ ಅಧಿಕಾರ ಸ್ವೀಕಾರ

Haveri - Kariyappa Aralikatti

ಹಾವೇರಿ: ಇಲ್ಲಿಯ ಜಿಪಂ ನೂತನ ಸಿಇಒ ಆಗಿ ರುಚಿ ಬಿಂದಾಲ್​ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಕರ್ತವ್ಯಕ್ಕೆ ಹಾಜರಾದ ಮೊದಲ ದಿನವೇ ಜಿಪಂ ಅಧಿಕಾರಿಗಳ ಮತ್ತು ಸಿಬ್ಬಂದಿ ಸಭೆ ನಡೆಸಿದ ಅವರು, ಕರ್ತವ್ಯ ನಿರ್ವಹಣೆ ಬಗ್ಗೆ ಹಲವು ನಿರ್ದೇಶನ ನೀಡಿದರು. ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವುದು ಮತ್ತು ಕೆಲಸಗಳ ವಿಳಂಭಕ್ಕೆ ಆಸ್ಪದ ನೀಡದೆ ಎಚ್ಚರಿಕೆವಹಿಸಲು ಖಡಕ್​ ಸೂಚನೆ ನೀಡಿದರು.

ಕಚೇರಿಯ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಗಾಂಧಿಜಿಯವರ ಕನಸಿನಂತೆ ಸ್ವಚ್ಛ ಪರಿಸರದಿಂದ ಸ್ವಚ್ಚ ಆಡಳಿತ ಹಾಗೂ ಸಮಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡುವುದು ಮುಖ್ಯ ಎಂದರು.

ಇನ್ನೂ ಕರ್ತವ್ಯಕ್ಕೆ ಸಂಬಂದಿಸಿದಂತೆ, ಸಿಬ್ಬಂದಿ ಪತ್ರವ್ಯವಹಾರ ಮತ್ತು ಕಡತಗಳ ವಿಳಂಬಕ್ಕೆ ಆಸ್ಪದ ನೀಡದಂತೆ ತ್ವರಿತವಾಗಿ ನಿರ್ವಹಣೆ ಮಾಡುವುದು. ಸಾರ್ವಜನಿಕ ಅಹವಾಲುಗಳನ್ನು ಪ್ರಥಮ ಆದ್ಯತೆ ಮೇರೆಗೆ ಕೈಗತ್ತಿಕೊಳ್ಳುವುದು ಹಾಗೂ ತ್ವರಿತವಾಗಿ ಸ್ಪಂದನೆ ನೀಡುವುದು ಎಲ್ಲರ ಜವಾಬ್ದಾರಿ ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ದಿಗಾಗಿ ಪ್ರಥಮ ಆದ್ಯತೆ ನೀಡುವ ಮೂಲಕ ಅಧಿಕಾರ ವಹಿಸಿಕೊಂಡಿದ್ದೇನೆ. ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆಡಳಿತ ಮತ್ತು ಅಭಿವೃದ್ದಿ ಕಾಮಗಾರಿಗಳಗೆ ಸಂಬಂಧಿಸಿದಂತೆ ಯಾವುದೇ ಕಾರ್ಯ ವಿಳಂಬವಾಗದಂತೆ ಎಲ್ಲರೂ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ನಂತರ ಜಿಪಂ ಎಲ್ಲ ಶಾಖೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕುಂದುಕೊರತೆ ಮತ್ತು ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ಅಲ್ಲದೆ ಸ್ವಚ್ಛತೆ ಬಗ್ಗೆ ಕೆಲವೊಂದು ಬದಲಾವಣೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ "ಅಕ್ಕ ಕೆಫೆ"ಗೆ ಭೇಟಿ ನೀಡಿದ ಅವರು ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ತಿಳಿಸಿ, ಮುಂದಿನ ದಿನದಲ್ಲಿ ಜಿಪಂ ಕಡೆಯಿಂದ ನಿರಂತರ ಪ್ರೋತ್ಸಾಹ ನೀಡುವ ಭರವಸೆ ನೀಡಿದರು.

ಜಿಪಂ ಉಪ ಕಾರ್ಯದಶಿರ್ ಡಾ. ಂಗಸ್ವಾಮಿ, ಸಿಪಿಓ ಎಚ್​.ವೈ. ಮೀಸಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.