ನ್ಯೂಸ್

WEEKEND WITH RAMESH: ಸಾಧಕರ ಕುರ್ಚಿ ಏರಿದ ಟ್ರಬಲ್ ಶೂಟರ್ ಡಿ. ಕೆ ಶಿವಕುಮಾರ್​​

ಬೆಂಗಳೂರು: ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ವಿಕೇಂಡ್​ ವಿತ್​ ರಮೇಶ್​​ ಕಾರ್ಯಕ್ರಮವು ಜನಮನ್ನಣೆಯನ್ನು ಪಡೆದುಕೊಂಡಿದೆ. ಈ ವಾರ ವೀಕೆಂಡ್​ ವಿತ್ ರಮೇಶ್​ ಕಾರ್ಯಕ್ರಮದಲ್ಲಿ ರಾಜ್ಯದ ಡಿಸಿಎಂ ಡಿ.ಕೆ ಶಿವಕುಮಾರ್​ ಸಾಧಕರ ಕುರ್ಚಿ ಏರುತ್ತಿದ್ದಾರೆ.

ಸೀಸನ್‌ 5ರಲ್ಲಿ ಮೋಹಕ ತಾರೆ ರಮ್ಯಾ ಅವರಿಂದ ಆರಂಭವಾದ ಈ ಶೋಗೆ ಇದೀಗ ಈ ವಾರ ಟ್ರಬಲ್‌ ಶೂಟರ್‌, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಾಧಕರ ಕುರ್ಚಿಯಲ್ಲಿ ಆಸಿನರಾಗಲಿದ್ದಾರೆ. ಈಗಾಗಲೇ ವಾಹಿನಿ ಕಡೆಯಿಂದ ಪೋಸ್ಟರ್​​ ಒಂದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಡಿಕೆಶಿ ಅವರು ಬರುವುದು ಖಚಿತ ಎನ್ನುವ ಮಾಹಿತಿಯನ್ನು ಖಾತರಿ ಪಡಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಅವರ ಪತ್ನಿ ಉಷಾ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಕೆಶಿ ಕುಟುಂಬಸ್ಥರು, ಆಪ್ತರು ಕಾಣಿಸಿಕೊಳ್ಳಲಿದ್ದಾರೆ.

ಈ ವಾರ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ಈ ವಾರಾಂತ್ಯದಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಘಟಾನುಘಟಿ ನಾಯಕನ ನೈಜ ಜೀವನ ವೀಕೆಂಡ್‌ ವಿಥ್‌ ರಮೇಶ್‌ ಶೋದಲ್ಲಿ ಅನಾವರಣಗೊಳ್ಳಲಿದೆ. ರಾಜಕೀಯ ಮಾತ್ರವಲ್ಲದೆ, ವೈಯಕ್ತಿಕ ಜೀವನ, ಉದ್ಯಮ, ಅನುಭವಿಸಿದ ಯಾತನೆ ಎಲ್ಲವನ್ನೂ ವೀಕೆಂಡ್‌ ಶೋದಲ್ಲಿ ಅನಾವರಣ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.