ನ್ಯೂಸ್

ಮೊದಲು ನಿನ್ನ ಅಣ್ಣನ ಆಸ್ತಿ ಲೆಕ್ಕ ಕೊಡು, ನಂತ್ರ ನನ್ನದು ಕೊಡುತ್ತೇನೆ; ಎಚ್​ಡಿಕೆ ವಿರುದ್ಧ ಏಕವಚನದಲ್ಲೇ ಡಿಕೆಶಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಾದ ಬಿಜಪಿ ಹಾಗೂ ಜೆಡಿಎಸ್​ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನ್ಕಕೆ ಕಾಲಿಟ್ಟಿದ್ದು, ಇದರ ಬೆನ್ನಲ್ಲೇ ಕೇಂದ್ರ ಸಸಿವ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್​ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​, ನೀನು ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು. ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ.

ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ಮೊದಲು ಅವನ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ. ವಿಜಯೇಂದ್ರ ಹೇಳುತ್ತಾನೆ ಭ್ರಷ್ಟಾಚಾರದ ಪಿತಾಮಹಾ ನಾನು ಎಂದು. ನೀನು ಮೊದಲು ಹೇಳಪ್ಪ, ನೀನು ನಿಮ್ಮಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿ ರಾಜೀನಾಮೆ ಕೊಡಿಸಿದೆ. ನನ್ನನ್ನು ಪ್ರಶ್ನಿಸುವ ಬದಲು ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್​ಗೆ ಮೊದಲು ಉತ್ತರ ಕೊಡಿ ಆನಂತರ ನನ್ನನ್ನು ಪ್ರಶ್ನಿಸುವಂತೆ.

ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಬಿಜೆಪಿ-ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.