ಸಾಂದರ್ಭಿಕ ಚಿತ್ರ 
ನ್ಯೂಸ್

ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ, ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ: ಡಿ.ಕೆ ಶಿವಕುಮಾರ್

Bengaluru - General - Rama Kishan K V

ಬೆಂಗಳೂರು: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಕುರಿತು ಇಂದು ಸಭೆ ನಡೆಸಲಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಮಾಹಿತಿ ನೀಡಿದ್ದಾರೆ ಮತ್ತು ಮನವಿ ಕೂಡ ಮಾಡಿದ್ದಾರೆ.

"ಕಾಂಗ್ರೆಸ್‌ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ" ಎಂದು ಹೇಳಿದರು.

"ಶುಕ್ರವಾರ ಕ್ಯಾಬಿನೆಟ್‌ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ನಾನು ಮನವಿ ಮಾಡುತ್ತಿದ್ದೇನೆ" ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.