ನ್ಯೂಸ್

ನವೆಂಬರ್​ 01ರಂದು ಎಲ್ಲಾ ಕಡೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: DK Shivakumar

ಬೆಂಗಳೂರು: ನವೆಂಬರ್​ 01ರಂದು ಎಲ್ಲಾ ಶಾಲಾ (School), ಕಾಲೇಜು (College), ಕಾರ್ಖಾನೆಗಳು (Factory) ಮತ್ತು ಐಟಿಬಿಟಿ (ITBT) ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ (Kannada Flag) ಹಾರಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ (DK Shivakumar) ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)​, ಈ ಬಾರಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಆಚರಿಸಲು ನಿರ್ಧರಿಸಿದ್ದೇವೆ. ಬೆಂಗಳೂರು (Bengaluru) ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ (National Flag) ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು (Pro Kannada Organisation) ಕೂಡ ಒತ್ತಡ ಹೇರಬಾರದೆಂದು ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದಿದ್ದಾರೆ.

ಕೋವಿಡ್​ ಸಮಯದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್​ಐಟಿ ರಚಿಸಲು ಮುಂದಾಗಿರುವ ಬಗ್ಗೆ ಮಾತನಾಡಿ, ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar)​ ಹೇಳಿದ್ದಾರೆ.