ಚೆನ್ನೈ: ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು.
ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಶೋಭಾ ಕರಂದ್ಲಾಜೆ ಕ್ಷಮೆಯಾಚನೆ: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಕೇಳಿದ್ದಾರೆ.
ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, "ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ, ನನ್ನ ಮಾತುಗಳು ಬೆಳಕು ಚೆಲ್ಲುವ ಉದ್ದೇಶವನ್ನು ಹೊಂದಿದ್ದವು, ನೋವು ಉಂಟುಮಾಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎನ್ನುವುದನ್ನು ನೋಡಿದ್ದೇನೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು, ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಾತ್ರ ನಾನು ಟೀಕೆ ಮಾಡಿದ್ದೇನೆ. ತಮಿಳುನಾಡಿನ ಜನತೆಗೆ ನಾನು ಮನಃಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪೋಸ್ಟ್ ಮಾಡಿದ್ದಾರೆ.
ಐಪಿಎಲ್ ಆರಂಭಕ್ಕೂ ಮುನ್ನವೇ ಮನೀಶ್ ಪಾಂಡೆ ವಿರುದ್ಧ ರಸೆಲ್ ಶಾಕಿಂಗ್ ಕಾಮೆಂಟ್: ಕಾರಣ ಹೀಗಿದೆ!