ಬೆಂಗಳೂರು: ಕೆಲ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಸುತ್ತೋಲೆಯೊಂದನ್ನು ಹೊರಡಿಸಿರುವ ಉನ್ನತ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ರಾಜ್ಯಾದ್ಯಂತ ಕೋವಿಡ್-19 ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿರುವ ಸ್ಥಳದಲ್ಲಿಯೇ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ವ್ಯವಸ್ಥೆ ಮಾಡುವುದು, ಅವರಿಗೆ ಅಗತ್ಯವಾದ ವಸ್ತುಗಳನ್ನು ಪೂರೈಸುವುದು ಹಾಗೂ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಇಲಾಕೆಯ ಅಧೀನ ಕಾರ್ಯದರ್ಶಿ ಆರ್. ಮಹೇಸ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.