Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಕೆಲವರು ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಎಲ್ಲ 12 ರಾಶಿಚಕ್ರದ ಚಿಹ್ನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.
ಮನುಷ್ಯನ ಒಳಿತು-ಕೆಡುಕು, ನಡೆ-ನುಡಿ ಎಲ್ಲದರ ಮೇಲೂ ಗ್ರಹಗಳು ಪ್ರಭಾವ ಬೀರುತ್ತವೆ. ಒಬ್ಬ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರುತ್ತದೆ? ಆತನ ವಿಶಿಷ್ಟ ಗುಣಗಳು ಏನೆಂಬುದನ್ನು ಗ್ರಹಗತಿಗಳ ಆಧಾರದ ಮೇಲೆ ಸುಲಭ ಊಹಿಸಬಹುದಾಗಿದೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ.
ಅಂದಹಾಗೆ ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಮಹಿಳೆಯರು ಸ್ವಾಭಾವಿಕವಾಗಿ ಪ್ರೀತಿಗಾಗಿ ಹಾತೊರೆಯುತ್ತಾರೆ ಮತ್ತು ಸುಲಭವಾಗಿ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಹೆಚ್ಚು. ಅಂತಹ ಮಹಿಳೆಯರು ಯಾವ ರಾಶಿಯಲ್ಲಿ ಜನಿಸುತ್ತಾರೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
ಕರ್ಕಾಟಕ ರಾಶಿಯಲ್ಲಿ ಜನಿಸಿದ ಮಹಿಳೆಯರು ಸ್ವಾಭಾವಿಕವಾಗಿ ತುಂಬಾ ನಾಚಿಕೆ ಸ್ವಭಾವದವರಾಗಿರುತ್ತಾರೆ. ಆದರೆ, ಅವರು ಸ್ನೇಹಪರ ರೀತಿಯಲ್ಲಿ ಮಾತನಾಡುವ ಯಾರೊಂದಿಗಾದರೂ ಬೇಗನೆ ಸ್ನೇಹ ಬೆಳೆಸುತ್ತಾರೆ. ಈ ರಾಶಿಯವರಿಗೆ ಪ್ರಣಯ ವಿಷಯಗಳ ಬಗ್ಗೆ ಸ್ವಲ್ಪ ಹೆಚ್ಚು ಆಸಕ್ತಿ ಮತ್ತು ಉತ್ಸಾಹ ಇರುತ್ತದೆ. ಅವರಿಗೆ ನಿಮ್ಮಲ್ಲಿರುವ ಪ್ರೀತಿಯನ್ನು ತುಂಬಾ ಪ್ರೀತಿಯಿಂದ ವ್ಯಕ್ತಪಡಿಸಿದರೆ, ಸ್ವಲ್ಪವೂ ಯೋಚಿಸದೆ ತಕ್ಷಣ ಒಪ್ಪುತ್ತಾರೆ. ಇವರು ಪ್ರೀತಿಗಾಗಿ ಹಂಬಲಿಸುವ ಜನರು ಮತ್ತು ಪ್ರೀತಿಸಿದರೆ ಏನು ಬೇಕಾದರೂ ಬಿಟ್ಟುಕೊಡಲು ಸಿದ್ಧರಿರುತ್ತಾರೆ.
ಸಿಂಹ ರಾಶಿ ಅಡಿಯಲ್ಲಿ ಜನಿಸಿದ ಮಹಿಳೆಯರು ತಮ್ಮ ಅಭಿಪ್ರಾಯಗಳನ್ನು ಮತ್ತು ಅತ್ಯಾಧುನಿಕ ಜೀವನಶೈಲಿಯನ್ನು ಗೌರವಿಸುತ್ತಾರೆ. ಅವರು ಖಂಡಿತವಾಗಿಯೂ ಸುಲಭವಾಗಿ ಪ್ರೀತಿಯಲ್ಲಿ ಬೀಳುವ ಗುಣವನ್ನು ಹೊಂದಿರುತ್ತಾರೆ. ಅವರು ಎಲ್ಲರ ಭಾವನೆಗಳಿಗೂ ಪ್ರಾಮುಖ್ಯತೆಯನ್ನು ನೀಡುತ್ತಾರೆ ಮತ್ತು ನೀವು ನಿಮ್ಮ ಪ್ರೀತಿಯನ್ನು ಹೃದಯ ಸ್ಪರ್ಶಿಸುವ ರೀತಿಯಲ್ಲಿ ವ್ಯಕ್ತಪಡಿಸಿದರೆ, ತಕ್ಷಣ ಪ್ರೀತಿಯಲ್ಲಿ ಬೀಳುತ್ತಾರೆ. ಈ ರಾಶಿಯವರು ತಮ್ಮ ಸಂಗಾತಿಯ ಆಸೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅವರು ತಮ್ಮ ಸಂಗಾತಿಯ ಮನಸ್ಸನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ. ಪ್ರೀತಿಯಿಂದ ಮಾತ್ರ ಬಂಧಿತರಾಗುವ ಸ್ವಭಾವವನ್ನು ಹೊಂದಿರುತ್ತಾರೆ.
ಈ ರಾಶಿಚಕ್ರ ಚಿಹ್ನೆಯ ಮಹಿಳೆಯರು ಪ್ರೀತಿಯ ವಿಷಯಕ್ಕೆ ಬಂದಾಗ ತುಂಬಾ ಪ್ರಾಮಾಣಿಕರು ಮತ್ತು ನಿಷ್ಠಾವಂತರು. ಈ ರಾಶಿಚಕ್ರದ ಮಹಿಳೆಯರು, ಪ್ರೀತಿಯನ್ನು ಗೌರವಯುತವಾಗಿ ವ್ಯಕ್ತಪಡಿಸುವವರ ಕಡೆ ಸುಲಭವಾಗಿ ಆಕರ್ಷಿತರಾಗುತ್ತಾರೆ. ಏಕೆಂದರೆ. ಅವರು ಸ್ವಾಭಿಮಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಈ ಮಹಿಳೆಯರು ತಮ್ಮನ್ನು ಪ್ರೀತಿ ಮತ್ತು ಗೌರವದಿಂದ ನಡೆಸಿಕೊಳ್ಳುವ ಪುರುಷನೊಂದಿಗೆ ಬೇಗನೆ ಪ್ರೀತಿಯಲ್ಲಿ ಬೀಳುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.