ನ್ಯೂಸ್

ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್​ಗೆ ಡಾಕ್ಟರೇಟ್​

ಬೆಂಗಳೂರು: ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಂ. ಅರುಣ್ ಶ್ಯಾಮ್ ಅವರಿಗೆ ಬೆಂಗಳೂರಿನ ಅಲಯನ್ಸ್ ಯೂನಿವರ್ಸಿಟಿಯ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಹಿರಿಯ ವಕೀಲರಾದ ಇವರು ಕಾನೂನಿನ ವಿಷಯದಲ್ಲಿ ಅಧ್ಯಯನ ಮಾಡಿ ಸಲ್ಲಿಸಿದ್ದ ಪ್ರಬಂಧಕ್ಕೆ ಸಂಬಂಧಿಸಿದಂತೆ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾನೂನು ಆಯೋಗದ ಮುಖ್ಯಸ್ಥರಾದ ಕೇರಳ ಉಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಸ್.ಆರ್.ಬನ್ನೂರಮಠ, ಸಚಿವ ಸಿ.ಎನ್. ಅಶ್ವತ್ಥನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.