stray dog attack  
ನ್ಯೂಸ್

ಮಗುವಿನ ಮೇಲೆ ನಾಯಿ ದಾಳಿ

ಶಿವಶಂಕರ್ ಎಂ. ಹೆಬ್ಬಳ್ಳ

ಕೊಳ್ಳೇಗಾಲ: ತಾಲೂಕಿನ ತಿಮ್ಮರಾಜೀಪುರ ಗ್ರಾಮದಲ್ಲಿ ಶುಕ್ರವಾರ ಮೂರು ವರ್ಷದ ಮಗುವಿನ ಮೇಲೆ ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ.

ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರಿ ದಿಶಾ ನಾಯಿ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಳಗ್ಗೆ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ನಾಯಿ ದಾಳಿ ಮಾಡಿ ಎದೆ ಹಾಗೂ ಮುಖದ ಭಾಗದಲ್ಲಿ ಕಚ್ಚಿ ಗಾಯಗೊಳಿಸಿದೆ. ಬಳಿಕ ಪಾಲಕರು ಮಗುವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಒಂದು ತಿಂಗಳಲ್ಲಿ ನಾಲ್ವರಿಗೆ ನಾಯಿ ಕಡಿತ: ಕಳೆದ ಒಂದು ತಿಂಗಳಲ್ಲಿ ಮೂರ‌್ನಾಲ್ಕು ಜನರಿಗೆ ನಾಯಿ ಕಡಿದಿದ್ದು ತಿಮ್ಮರಾಜೀ ಪುರದಲ್ಲಿ ಜನರು ಭಯ ಭೀತರಾಗಿದ್ದಾರೆ.

ತಿಮ್ಮರಾಜೀಪುರ ಗ್ರಾಮದಲ್ಲಿ ಮಗುವಿನ ಮೇಲೆ ನಾಯಿ ದಾಳಿ ನಡೆಸಿರುವ ಹಿನ್ನಲೆ ಪಶು ವೈದ್ಯಾಧಿಕಾರಿಗಳ ಜತೆ ಚರ್ಚಿಸಿದ್ದೇನೆ. ತಿಮ್ಮರಾಜೀಪುರ ಗ್ರಾಮಕ್ಕೆ 2-3 ನಾಯಿಗಳು ಸೇರಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಆ ನಾಯಿಗಳನ್ನು ಸೆರೆ ಹಿಡಿದು ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿ ಬಿಡಲಾಗುತ್ತದೆ. ಮುಂದೆ ನಾಯಿಗಳ ಹಾವಳಿಯನ್ನು ತಪ್ಪಿಸಲಾಗುವುದು.

ಗುರುಶಾಂತಪ್ಪ ಬೆಳ್ಳುಂಗಡಿ

ಕಾರ್ಯ ನಿರ್ವಾಹಕ ಅಧಿಕಾರಿ ತಾ.ಪಂ. ಕೊಳ್ಳೇಗಾಲ