ವಾಷಿಂಗ್ಟನ್ ಡಿಸಿ: ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ: ಜಯನಗರದ ರಾಯರ ಮಠಕ್ಕೆ ಬ್ರಿಟನ್ ಮಾಜಿ ಪ್ರಧಾನಿ ಭೇಟಿ; ಧಾರ್ಮಿಕ ವಿಧಿವಿಧಾನಗಲ್ಲಿ ಪಾಲ್ಗೊಂಡ Rishi Sunak & Akshata Murty
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ ಅವರು ಅವರಿಗಿಂತ 251 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.
ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ನಮ್ಮ ದೇಶಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.
ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ ಎಂದರು. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರತಿದಿನ ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್)