ತಿ.ನರಸೀಪುರ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಕೋರ್ಸ್ ಆರಂಭಿಸಿರುವುದರಿಂದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ 46 ಕಂಪ್ಯೂಟರ್‌ಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಪ್ರಾಂಶುಪಾಲ ಡಾ.ಎಚ್.ವಿ.ಉದಯಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಗಣಕಯಂತ್ರ ವಿಜ್ಞಾನ ವಿಭಾಗದ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜಿನಲ್ಲಿ ಬಿಸಿಎ ಮತ್ತು ಕಂಪ್ಯೂಟರ್ ವಿಜ್ಞಾನ ವಿಭಾಗವನ್ನು ಅರಂಭಿಸಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯಿಂದ ಒಟ್ಟು 46 ಕಂಪ್ಯೂಟರ್‌ಗಳನ್ನು ಬಿಸಿಎ ವಿದ್ಯಾರ್ಥಿಗಳ ಬಳಕೆಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಕಲ್ಪಿಸಲಾಗಿದೆ ಎಂದರು.
ಐಕ್ಯೂಎಸಿ ಸಂಚಾಲಕಿ ಡಾ.ಎಂ.ಕೆ.ಮಾಧವಿ, ವಿಭಾಗದ ಮುಖ್ಯಸ್ಥ ಎಂ.ಕಿರಣ್ ಕುಮಾರ್, ಮಹೇಶ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸವಿತಾ, ಉಪನ್ಯಾಸಕಿ ಮಮತಾ, ಕುಮಾರಿ, ಸುಮಯ್ಯ ತಬಸಂ ಇತರರು ಇದ್ದರು.