ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಪಕ್ಷವಾಗಬೇಕು. ಕೇವಲ ನಾಯಕರ ಹಿಂಬಾಲಕರಾಗಬಾರದು. ನಮ್ಮ ಪಕ್ಷವನ್ನು ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಪಕ್ಷವನ್ನಾಗಿ ರೂಪಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು ಪ್ರತಿ ಕಾರ್ಯಕ್ರಮಕ್ಕೆ ಬರುವವರು ಕಚೇರಿಗೆ ಬಂದಾಗ ಪ್ರವೇಶದ್ವಾರದ ಬಳಿಯ ಪುಸ್ತಕದಲ್ಲಿ ದೂರವಾಣಿ ಸಂಖ್ಯೆ ನಮೂದಿಸದರೆ ಪ್ರತಿ ಸಭೆಯ ಮಾಹಿತಿ ನೀಡುತ್ತೇವೆ ಎಂದರು.
ದೇವರಾಜ ಅರಸು ಅವರು ಹಾಗೂ ರಾಜೀವ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರನ್ನು ಸಿಎ ವಿರುದ್ದ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ವಿರುದ್ದ ನಡೆದ ಪ್ರತಿಭಟನೆ ಕಾರಣಕ್ಕೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಹೇಳಿದರು.