ನ್ಯೂಸ್

ವಿಜಯಪುರದಲ್ಲಿ ಜೋಡಿ ಕೊಲೆ: ಹಳೆಯ ವೈಷಮ್ಯ ಶಂಕೆ! | Murder

Murder: ಹಳೆಯ ವೈಷಮ್ಯ ಹಿನ್ನೆಲೆ ಇಬ್ಬರು ಯುವಕರನ್ನು ಕೊಲೆಗೈದ ಘಟನೆ ಸೋಮವಾರ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಮೃತರು ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಹಂತಕರು ಪರಾರಿಯಾಗಿದ್ದಾರೆ. ಹಳೆ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ‌ ಶಂಕೆ ವ್ಯಕ್ತವಾಗಿದೆ.

ಎರಡು ವರ್ಷಗಳ ಹಿಂದೆ ತಮ್ಮೂರಿನ ಈರನಗೌಡ ಮೇಲೆ ತೀವ್ರ ಹಲ್ಲೆ ಮಾಡಿದ್ದ ಇಸಾಕ್ ಖರೇಷಿ ಹಾಗೂ ಸಾಗರ ಹಲ್ಲೆ ನಡೆಸಿದ್ದರು. ಆದರೆ, ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ಈರನಗೌಡ ಮೃತಪಟ್ಟಿದ್ದರು. ಈ ಹಿನ್ನೆಲೆ ಜೋಡಿ ಕೊಲೆಗೆ ನಡೆದಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಸ್ಥಳಕ್ಕೆ ಬಂದಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾದಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಲ್ಲಿರುವ ಆರೋಪಿಗಳಿಗೆ ಬಲೆ ಬೀಸಿದ್ದಾರೆ.