ನ್ಯೂಸ್

Naxalite ವಿಕ್ರಮ್​ ಗೌಡ ಎನ್​ಕೌಂಟರ್​; ಕಾರ್ಯಾಚರಣೆ ಕುರಿತು ಗೃಹಸಚಿವ ಡಾ.ಜಿ. ಪರಮೇಶ್ವರ್​ ಹೇಳಿದ್ದಿಷ್ಟು

ಬೆಂಗಳೂರು: ಸರ್ಕಾರಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ನಕ್ಸಲೈಟ್​ (Naxalite) ವಿಕ್ರಮ್​ ಗೌಡ (Vikram Gowda) ನಕ್ಸಲ್​ ನಿಗ್ರಹ ಪಡೆ (ANF​) ಮತ್ತು ನಕ್ಸಲರ ನಡುವೆ ಸೋಮವಾರ (ನವೆಂಬರ್​ 18) ನಡೆದ ಗುಂಡಿನ ಕಾಳಗದಲ್ಲಿ ಬಲಿಯಾಗಿದ್ದು, ಈ ಬಗ್ಗೆ ಗೃಹಸಚಿವ ಡಾ.ಜಿ. ಪರಮೇಶ್ವರ್ (DR. G. Parameshwar)​ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಈ ಬಗ್ಗೆ ಮಾತನಾಡಿದ ಗೃಹಸಚಿವ ಪರಮೇಶ್ವರ್ (DR. G. Parameshwar)​, ವಿಕ್ರಮ್ ಗೌಡ (Vikram Gowda) ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ.

ನಿನ್ನೆ (ನವೆಂಬರ್​ 18) ಸಂಜೆ ವಿಕ್ರಮ್​ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ (ನವೆಂಬರ್​ 18) ರಾತ್ರಿ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ.

ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ, ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆದರು. ನಂತರ ಅವರಿಬ್ಬರೂ ತಪ್ಪಿಸಿಕೊಂಡು ಹೋದರೆಂದು ಕೂಂಬಿಂಗ್ ಆಪರೇಷನ್ ನಡೆಸಲಾಯ್ತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆತನ ಎನ್‌ಕೌಂಟರ್ ಮಾಡುವುದು ಆ ಸಂದರ್ಭದಲ್ಲಿ ಪೊಲೀಸರಿಗೆ ಅನಿವಾರ್ಯವಾಗಿತ್ತು.

ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅರಣ್ಯ ಭಾಗದಲ್ಲಿದ್ದುಕೊಂಡು ಈ ರೀತಿ ತಪ್ಪಿಸಿಕೊಂಡು ಹೋದಾಗ ಈ ರೀತಿಯಾಗುವುದು ಸಹಜ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (DR. G. Parameshwar)​ ತಿಳಿಸಿದ್ದಾರೆ.