ನ್ಯೂಸ್

ಡಾ. ನರಹಳ್ಳಿ ಪ್ರತಿಷ್ಠಾನ ಪ್ರಶಸ್ತಿ ಪ್ರಕಟ

ಪಂಕಜ ಕೆ.ಎಂ.

ಬೆಂಗಳೂರು: ಡಾ.ನರಹಳ್ಳಿ ಪ್ರತಿಷ್ಠಾನ ವತಿಯಿಂದ 2023ನೇ ಸಾಲಿನ ‘‘ಯುವ ಬರಹಗಾರ ಪ್ರಶಸ್ತಿ’ ಪ್ರಕಟಗೊಂಡಿದ್ದು, ಬರಹಗಾರ ಚ.ಹ.ರಘುನಾಥ್ ಪ್ರಸಶ್ತಿಗೆ ಭಾಜನರಾಗಿದ್ದಾರೆ.

ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ನೀಡಲಾಗುತ್ತಿರುವ ‘ನರಹಳ್ಳಿ ದಶಮಾನೋತ್ಸವ ಪುರಸ್ಕಾರ’ಕ್ಕೆ ಪತ್ರಕರ್ತ ಹಾಗೂ ಲೇಖಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ 15 ಸಾವಿರ ರೂ. ನಗದು ಒಳಗೊಂಡಿದೆ. ಎಚ್.ಎಸ್. ವೆಂಕಟೇಶಮೂರ್ತಿ, ಬಿ.ಆರ್. ಲಕ್ಷಣರಾವ್, ಸಿ.ಕೆ. ರಾಮೇಗೌಡ, ನ. ರವಿಕುಮಾರ್, ರಜನಿ ನರಹಳ್ಳಿ ಅವರನ್ನು ಒಳಗೊಂಡ ಸಮಿತಿಯು ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಕನ್ನಡ ಜನಶಕ್ತಿ ಕೇಂದ್ರದ ಸಹಯೋಗದಲ್ಲಿ ಅಕ್ಟೋಬರ್ 8ರಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್.ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಹಿತಿ ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಎಚ್. ಎಸ್. ವೆಂಕಟೇಶಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೇಮಾ ಉಪಾಧ್ಯ ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಆನಂದರಾಮ ಉಪಾಧ್ಯ ತಿಳಿಸಿದ್ದಾರೆ.