ಚಿಂತಾಮಣಿ: ಚಿಂತಾಮಣಿ-&ಬೆಂಗಳೂರು ರಾಜ್ಯ ಹೆದ್ದಾರಿ ಜೋಡಿ ಹೊಸಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಚಾಲಕ, ಕ್ಲಿನರ್ಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡ ಚಾಲಕನನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು, ಆದರೆ ಚಿಕಿತ್ಸೆ ಲಿಸದೆ ಗುರುವಾರ ರಾತ್ರಿ ಎಚ್.ಕುಮಾರ್ ಮೃತಪಟ್ಟಿದ್ದಾನೆ.ಆಂಧ್ರ ಪ್ರದೇಶದ ಎಚ್.ಕುಮಾರ್ (26 )ಮೃತ, ಕಿರಣ್ (25) ಗಾಯಗೊಂಡವರು. ಮುಲಕಲಚೆರುವುನಿಂದ ಈರುಳ್ಳಿ, ಬೆಳ್ಳುಳ್ಳಿ ಇತರ ತರಕಾರಿ ತುಂಬಿಕೊಂಡು ಹೋಗುತ್ತಿದ್ದಾಗ ಟನೆ ಸಂಭವಿಸಿದೆ. ಕಿರಣ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.