ಸಾಂದರ್ಭಿಕ ಚಿತ್ರ  
ನ್ಯೂಸ್

ವಾರದಲ್ಲಿ 4 ದಿನ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ವಾರದಲ್ಲಿ ನಾಲ್ಕು ದಿನ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಲು ನಗರ ಸಂಚಾರ ವಿಭಾಗದ ಪೊಲೀಸರು ನಿರ್ಧರಿಸಿದ್ದಾರೆ.

ನಗರದಲ್ಲಿ ರಾತ್ರಿ ವೇಳೆ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿ ರಸ್ತೆ ಅಪಘಾತ ಮತ್ತು ರೋಡ್ ರೇಜ್ ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರಿಂದ ನಿಯಂತ್ರಿಸಲು ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರು/ಚಾಲಕರ ವಿರುದ್ಧ ಪ್ರತಿವಾರ ಠಾಣೆಯ ಎಲ್ಲ ಸಬ್‌ಇನ್‌ಸ್ಪೆಕ್ಟರ್‌ಗಳು ಕಡ್ಡಾಯವಾಗಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಬೇಕು ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ಸೂಚಿಸಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿರುವ ಜಂಕ್ಷನ್‌ಗಳಲ್ಲಿ ಮಾತ್ರ ಪ್ರಕರಣಗಳನ್ನು ದಾಖಲಿಸಬೇಕು. ದಾಖಲಿಸುವ ವೇಳೆ ಕಡ್ಡಾಯವಾಗಿ ಮಹಿಳಾ ಅಧಿಕಾರಿ ಅಥವಾ ಸಿಬ್ಬಂದಿ ಇರಬೇಕೆಂದು ಸೂಚನೆ ನೀಡಿದ್ದಾರೆ.