ನವದೆಹಲಿ: ವೇಗವಾಗಿ ಬಂದ ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಅಪಘಾತ ದೆಹಲಿಯ ರೋಹಿಣಿ ನಗರ ಪ್ರದೇಶದಲ್ಲಿ ವರದಿಯಾಗಿದೆ.
ಇದನ್ನೂ ಓದಿ: ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕರು ಮಾಡುವ ಘೋಷಣೆ, ಆಡುವ ಮಾತುಗಳು ನಾಟಕೀಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ, ಚಾಲಕ ನಿಯಂತ್ರಣ ಕಳೆದುಕೊಂಡು ಸ್ಥಳದಲ್ಲಿದ್ದ ಕಾರು ಮತ್ತು ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ,(ಏಜೆನ್ಸೀಸ್).