ನ್ಯೂಸ್

ದುಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ| indigo

ಅಹಮದಾಬಾದ್; ಇಂದು (ಆ.28) ಬೆಳಗ್ಗೆ ಗುಜರಾತ್‌ನ ಸೂರತ್‌ನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನವು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸುಮಾರು 150 ಪ್ರಯಾಣಿಕರಿದ್ದ ಇಂಡಿಗೋ ವಿಮಾನವನ್ನು (6E-1507) ಪೈಲಟ್‌ಗಳು ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಎರಡು ಗಂಟೆಗಳ ವಿರಾಮದ ನಂತರ, ಇಂಡಿಗೋ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿ ಅವರನ್ನು ದುಬೈಗೆ ಕಳುಹಿಸಲಾಗಿದೆ.

ತುರ್ತು ಭೂ ಸ್ಪರ್ಶ ಕುರಿತು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾತನಾಡಿದ್ದು, ಸೂರತ್ ನಿಂದ ದುಬೈಗೆ ಹೊರಟ್ಟಿದ್ದ ಇಂಡಿಗೋ ವಿಮಾನವೊಂದು ಅಹಮಾದಾಬಾದ್ ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ, ಸದ್ಯ ಘಟನೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲ. ವಿಮಾನದ ಇಂಜಿನ್ ತೊಂದರೆಗೊಳಗಾದ ನಂತರ ಪ್ರಯಾಣಿಕರು ಆತಂಕಕ್ಕೊಳಗಾಗಿದ್ದರು. ಬಳಿಕ ಪರಿಸ್ಥಿತಿಯನ್ನು ನಿಭಾಯಿಸಿದ ಸಿಬ್ಬಂದಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯ್ತು ಎಂದಿದ್ದಾರೆ.

(ಏಜೆನ್ಸೀಸ್)

ದೆಹಲಿಯಿಂದ ಗೋವಾಕ್ಕೆ ಹೊರಟಿದ್ದ ಮತ್ತೊಂದು ಇಂಡಿಗೊ ವಿಮಾನದ ಒಂದು ಎಂಜಿನ್ ವಿಫಲವಾದ ಕಾರಣ ಮುಂಬೈನಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ಇಳಿದ ಒಂದು ತಿಂಗಳ ನಂತರ ಈ ಘಟನೆ ಸಂಭವಿಸಿದೆ.