ನ್ಯೂಸ್

ಬಾಯ್ಲರ್ ಸ್ಫೋಟ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ!

ಮಹಾರಾಷ್ಟ್ರ: ಬಾಯ್ಲರ್​ ಸ್ಪೋಟಗೊಂಡ ಹಿನ್ನಲೆ ರೆಸ್ಟೋರೆಂಟ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ರಾತ್ರಿ ಮಹಾರಾಷ್ಟ್ರದ ಭಿವಂಡಿಯಲ್ಲಿ ವರದಿಯಾಗಿದೆ.

ರೆಸ್ಟೋರೆಂಟ್​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಬಾಯ್ಲರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).