ಗುಜರಾತ್: ಗುಜರಾತಿನ ನವಸಾರಿಯಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ 100ಕ್ಕೂ ಹೆಚ್ಚು ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ: Araga Jnanendra Slams Congress | ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ | Shivamogga
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಗೆ ತತ್ತರಿಸಿರುವ ಗುಜರಾತ್‌ನಲ್ಲಿ ಮುಂದಿನ 24 ಗಂಟೆಗಳ ಕಾಲ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).