Heavy Rains: ಈ ವರ್ಷ ವಾಡಿಕೆಗಿಂತ ಮುಂಚಿತವಾಗಿಯೇ ಮುಂಗಾರು ಪ್ರವೇಶಿಸಿದ್ದು, ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗಕ್ಕೆ ಭಾರೀ ಮಳೆಯನ್ನು ಹೊತ್ತುತಂದಿದೆ.
ಇದನ್ನೂ ಓದಿ: ಪಿಒಕೆ ಜನರು ನಮ್ಮವರೇ; ಭಾರತಕ್ಕೆ ಮರಳುವ ದಿನ ದೂರವಿಲ್ಲ; ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಸಂದೇಶ| Rajnath Singh
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಪ್ರಕ್ರಿಯೆ ರಚನೆಗೊಳ್ಳುತ್ತಿದ್ದಂತೆ ಕೇರಳ ಗಡಿಭಾಗಗಳಲ್ಲಿ ಬಿರುಸಿನ ಮಳೆಯಾಗುವ ಮುನ್ಸೂಚನೆಯನ್ನು ಇದೀಗ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮೇ.31 ರವರೆಗೆ ಕೇರಳದ ಹಲವೆಡೆ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಕಳೆದ ಎರಡು ದಿನದಿಂದ ದೇಶಾದ್ಯಂತ ಮಳೆಯ ಆರ್ಭಟ ಕೊಂಚ ಇಳಿದಿದ್ದು, ಮಳೆ ಪ್ರದೇಶಗಳಲ್ಲಿರುವ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ, ಹವಾಮಾನ ಇಲಾಖೆಯ ವರದಿ ಪ್ರಕಾರ, ಮುಂದಿನ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ ಎಂದು ಸೂಚಿಸಿದೆ. ಒಡಿಶಾ ಗಡಿಗಳಲ್ಲಿ ಕಡಿಮೆ ಒತ್ತಡ ಪ್ರದೇಶ ಬಲಗೊಳ್ಳುತ್ತಿರುವುದರಿಂದ, ಭಾರೀ ಮಳೆಯಾಗುವ ಸಾಧ್ಯತೆ ಮತ್ತು ಬಲವಾದ ಗಾಳಿಯೂ ಬೀಸಬಹುದು ಎಂದು ಇಲಾಖೆ ತಿಳಿಸಿದೆ.
ಇಂದು (ಮೇ.29) ಪತ್ತನಂತಿಟ್ಟ, ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರೊಟ್ಟಿಗೆ ರಾಜ್ಯದ ಇತರ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಶುಕ್ರವಾರ (ಮೇ.30) ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮೂಲಕ ಎಚ್ಚರಿಸಲಾಗಿದೆ.
ಕಾಸರಗೋಡು, ಕಣ್ಣೂರು, ಎರ್ನಾಕುಲಂ, ಇಡುಕ್ಕಿ, ಪಟ್ಟಣಂತಿಟ್ಟ ಮತ್ತು ವಯನಾಡ್ ಜಿಲ್ಲೆಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ,(ಏಜೆನ್ಸೀಸ್).