ನ್ಯೂಸ್

ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: 20ಕ್ಕೆ ತೀರ್ಪು ಕಾಯ್ದಿಟ್ಟ ಕೋರ್ಟ್

ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆ.20ಕ್ಕೆ ತೀರ್ಪು ಕಾಯ್ದಿರಿಸಿದೆ.

ಗಣಪತಿ ಅವರ ಶವ ಮಡಿಕೇರಿಯ ವಿನಾಯಕ ಲಾಡ್ಜ್​ನಲ್ಲಿ 2016ರ ಜು.7ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದಕ್ಕೂ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ, ಕಾಂಗ್ರೆಸ್ ಮುಖಂಡ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್, ಪ್ರಣವ್ ಮೊಹಂತಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ಇವರಿಗೆ ಯಾರೂ ಕಿರುಕುಳ ನೀಡಿರಲಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ಬಿ- ರಿಪೋರ್ಟ್ ಸಲ್ಲಿಸಿತ್ತು.

ಇದನ್ನು ಪ್ರಶ್ನಿಸಿ ಗಣಪತಿ ಕುಟುಂಬಸ್ಥರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು.