ಬೆಳಗಾವಿ: ಕರೊನಾದಿಂದಾಗಿ ಸದ್ಯ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಹಾಗಂತ ಸರ್ಕಾರಿ ನೌಕರರ ವೇತನ ತಡೆ ಹಿಡಿದಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನೂ ನಿಲ್ಲಿಸಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿ ಪರಿಹಾರ ವಿತರಣೆ ವಿಷಯದಲ್ಲಿ 10 ರೂ. ಕೂಡ ದುರುಪಯೋಗ ಆಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರವೇ ಪರಿಹಾರ ವಿತರಿಸಲಾಗುತ್ತಿದೆ. | ಬಿ.ಎಸ್. ಯಡಿಯೂರಪ್ಪ, ಸಿಎಂ
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ 2-3 ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೀರಾಗೆ ಕೈಲಾಸಕ್ಕೆ ಹೋಗೋ ಆಸೆಯಂತೆ …
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಆರೋಗ್ಯ ಭಾಗ್ಯದಲ್ಲಿ ಪೊಲೀಸರನ್ನು ಸೇರಿಸಿದ್ದು, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕ್ಕೆ ಸೂಚನೆ ನೀಡಲಾಗುವುದು. ಯಾವುದೇ ಖಾಸಗಿ ಆಸ್ಪತ್ರೆ ಪೊಲೀಸರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಕುರಿತು ದೂರು ಬಂದಿಲ್ಲ ಎಂದರು.