ನ್ಯೂಸ್

ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪಿಎ ಅರೆಸ್ಟ್​

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್​ನನ್ನು ಬಂಧಿಸಿದ್ದಾರೆ.

ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಅಹಾಯಕ ಹರೀಶ್​ನನ್ನು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಸುದ್ದಿ ನಿರೀಕ್ಷಿಸಲಾಗಿದೆ...