ಬೆಂಗಳೂರು: ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್ರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಬಾಲಕೃಷ್ಣ ಅಪ್ಪುಗೋಳ್ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯನ್ವಯ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಅಪ್ಪುಗೋಳ್ಗೆ ಸೇರಿದ 31.35 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆ ಸ್ವಾಧೀನಕ್ಕೆ ಪಡೆದುಕೊಂಡಿದೆ.
ಇದನ್ನೂ ಓದಿ; ಚೀನಾ ಸಿಲ್ಕ್ ಬ್ಯಾನ್…? ಸ್ವಾವಲಂಬನೆಗೆ ಸೂತ್ರ…!
ಸೊಸೈಟಿಯಲ್ಲಿ ಠೇವಣಿಯಿಟ್ಟಿದ್ದ ಸಾವಿರಾರು ಜನರ 250 ಕೋಟಿ ರೂ.ಗೂ ಅಧೀಕ ಮೊತ್ತವನ್ನು ದುರ್ಬಳಕೆ ಮಾಡಿದ ಆರೋಪ ಆನಂದ್ ಅಪ್ಪುಗೋಳ ಮೇಲಿದೆ. ಈತನ ವಿರುದ್ಧ ಹಲವರು ದೂರು ದಾಖಲಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.
ಠೇವಣಿದಾರರ ಹಣದಲ್ಲಿ ಹಲವು ಆಸ್ತಿ, ಐಷಾರಾಮಿ ಬಂಗಲೆಗಳನ್ನು ಆನಂದ್ ಅಪ್ಪುಗೋಳ ಖರೀದಿಸಿದ್ದಾನೆ. ಇವೆಲ್ಲವನ್ನೂ ಹರಾಜು ಮಾಡಲು ಬೆಳಗಾವಿ ಜಿಲ್ಲಾಡಳಿತ ಮುಂದಾಗಿತ್ತು. ಇದೀಗ ಜಾರಿ ನಿರ್ದೇಶನಾಲಯ ಇವನ್ನು ವಶಕ್ಕೆ ಪಡೆದಿದೆ.