ಜಿ.ಪರಮೇಶ್ವರ್ ಅವರ ಸಂಸ್ಥೆಗಳ ಮೇಲೆ ಇಡಿ ದಾಳಿ ಬಗ್ಗೆ ನಾನು ಮಾಹಿತಿ ಪಡೆದು ಮಾತನಾಡುತ್ತೇನೆ. ಪರಮೇಶ್ವರ್ ಅವರು ಅತ್ಯಂತ ಸರಳ ವ್ಯಕ್ತಿ. ಅವರು ಯಾವುದೇ ತಪ್ಪು ಮಾಡಿರಲು ಸಾಧ್ಯವಿಲ್ಲ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.
ಇದನ್ನೂ ಓದಿ:‘ತನ್ನ ಚಿಕ್ಕಪ್ಪನಂತೆಯೇ ಇದ್ದ’ ಎಂದು ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯನ್ನು ಇರಿದು ಕೊಂದ ಮತ್ತೊಬ್ಬ ಭಾರತೀಯ! Indian
ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ಹಾಗೂ ನಂತರ ಮಾಧ್ಯಮಗಳಿಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು. ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದನ್ನು ಬಿಜೆಪಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅವರ ಕಾಲದಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತಿದ್ದೇವೆ ಎಂದರು.
ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಕೆಶಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:‘ತನ್ನ ಚಿಕ್ಕಪ್ಪನಂತೆಯೇ ಇದ್ದ’ ಎಂದು ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯನ್ನು ಇರಿದು ಕೊಂದ ಮತ್ತೊಬ್ಬ ಭಾರತೀಯ! Indian
ನಾವು ಏನೇ ಮಾಡಿದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಕೆಆರ್ ಎಸ್ ಬಳಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ಮುಂದಾಗಿದ್ದೇವೆ. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಮಾಡಲಾಯಿತು. ಸುಮಾರು 25 ಸಾವಿರ ಜನರು ಭಾಗವಹಿಸಿದ್ದರು. ಸ್ಥಳೀಯ ಶಾಸಕರು ಇದನ್ನು ನೋಡಿ ಗಾಬರಿಯಾಗಿದ್ದರು. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ರೈತ ಸಂಘದವರು ಟೀಕೆ ಮಾಡುತ್ತಿದ್ದಾರೆ. ಅವರನ್ನು ಕರೆದು ಮಾತನಾಡಲಾಗುವುದು. ಟೀಕೆಗಳನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ, ಟೀಕೆಗಳಿಲ್ಲದೇ ಯಾವುದೇ ಕೆಲಸಗಳು ಆಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ತೆಗೆದುಕೊಂಡು ಹೋಗಲಾಗುವುದು ಎಂದರು.