ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ (Muda Scam) ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED Raid) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ನಟ ಅರ್ಜುನ್ ಕಪೂರ್ ಜತೆ ಲವ್ವಿಡವ್ವಿ, ಬ್ರೇಕಪ್! ಕಡೆಗೂ ಮೌನಮುರಿದ 50ರ ಬೆಡಗಿ ಮಲೈಕಾ ಅರೋರಾ | Malaika Arora
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇರೆಗೆ ಜಾರಿ ನಿರ್ದೇಶನಾಲಯ ದೂರು ದಾಖಲಿಸಿಕೊಂಡಿತ್ತು. ಸ್ನೇಹಮಯಿ ಕೃಷ್ಣ ನೀಡಿದ ದಾಖಲೆಗಳನ್ನು ಪರಿಶೀಲಿಸಿದ ಇಡಿ ಅಧಿಕಾರಿಗಳು ನಂತರ ಮುಡಾಗೆ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಇದಾದ ನಂತರ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 20 ಇಡಿ ಅಧಿಕಾರಿಗಳು ದಾಳಿ ನಡೆಸಿ ಹಗರಣಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ.
ಪ್ರಕರಣದ 4ನೇ ಆರೋಪಿ ದೇವರಾಜು ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದೆ. ಕೆಸರೆಯಲ್ಲಿ 3.16 ಎಕರೆ ಜಾಗವನ್ನು ದೇವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿಗೆ ಮಾರಾಟ ಮಾಡಿದ್ದರು. ನಂತರ ಮಲ್ಲಿಕಾರ್ಜುನಸ್ವಾಮಿ ಆ ಜಾಗವನ್ನು ಸಹೋದರಿ, ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದರು. ಪ್ರಕರಣದ ಮೂಲ ದೇವರಾಜುವಿನಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ದೇವರಾಜು ಮನೆ ಮೇಲೆ ದಾಳಿ ನಡೆದಿದೆ.
ಇದನ್ನೂ ಓದಿ: ಡಯಾಲಿಸಸ್ ಸೇವೆ ಸದುಪಯೋಗ ಪಡೆದುಕೊಳ್ಳಿ
ದಾಳಿ ಕುರಿತು ಪ್ರತಿಕ್ರಿಯಿಸಿದ ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿ, ಕಾನೂನು ಹೋರಾಟಕ್ಕೆ ಜಯ ದೊರೆಯುತ್ತಿದೆ. ಈ ಹಗರಣ ಇಡಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೆಲವರು ಹೇಳಿದ್ದರು. ಆದರೆ, ಇಡಿ ಪ್ರಕರಣ ದಾಖಲಿಕೊಂಡು ಇದೀಗ ದಾಳಿ ನಡೆಸಿರುವುದು ನನ್ನ ಹೋರಾಟಕ್ಕೆ ಜಯ ದೊರೆತ್ತಿದೆ ಎಂದು ಹೇಳಿದರು.