ಬೆಂಗಳೂರು: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದ್ದು, ಜ.13ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಡಿಕೆಶಿಗೆ ಸೇರಿದ್ದು ಎನ್ನಲಾದ ದೆಹಲಿ ಪ್ಲಾ್ಯಟ್ನಲ್ಲಿ 8.57 ಕೋಟಿ ರೂ. ಪತ್ತೆ ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಮನ್ಸ್ ಜಾರಿಯಾಗಿದೆ.
2 ವಾರ ಮುಂದೂಡಿದ ಸುಪ್ರೀಂಕೋರ್ಟ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಕೆಶಿ ಮತ್ತವರ ಆಪ್ತರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ 2 ವಾರಕ್ಕೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆಯು ಶಿವಕುಮಾರ್, ಆಂಜನೇಯ ಹನುಮಂತಯ್ಯ ಮತ್ತು ಎನ್. ರಾಜೇಂದ್ರ ವಿರುದ್ಧ ಆದಾಯ ತೆರಿಗೆ ವಂಚನೆ ಹಾಗೂ ತಪು್ಪ ಹೇಳಿಕೆ ನೀಡಿದ್ದರ ಬಗ್ಗೆ ದೂರು ದಾಖಲಿಸಿತ್ತು.