30 August 2011, Rajasthan,India: Local girls meeting Mabel van Oranje on a tour of rural Rajasthan, India at Bonli and Hanuta villages meeting with local leaders and village girls to discuss the issue of child marriage. Picture by Graham Crouch/The Elders 
ನ್ಯೂಸ್

ಜ.15ರ ವರೆಗೆ ಶೈಕ್ಷಣಿಕ ಪ್ರವಾಸ ಅವಧಿ ವಿಸ್ತರಿಸಿದ ಶಿಕ್ಷಣ ಇಲಾಖೆ

ಬೆಂಗಳೂರು ಬೆಳಗಾವಿ ವಿಭಾಗದಲ್ಲಿ 2023-24ನೇ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸ ಕೈಗೊಲ್ಳುವ ಅವಧಿಯನ್ನು 2024ರ ಜ.15ರ ವರೆಗೆ ಶಾಲಾ ಶಿಕ್ಷಣ ಇಲಾಖೆಯು ವಿಸ್ತರಿಸಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಡಿಸೆಂಬರ್-2023 ಕೊನೆಯ ದಿನವಾಗಿದೆ. ಆದರೆ, ಈ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಬಸ್ಸುಗಳನ್ನು ಒದಗಿಸಲು ತೊಂದರೆಯಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಬಸ್ಸುಗಳು ಲಭ್ಯವಿಲ್ಲದ ಕಾರಣ ಶಾಲಾ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲು ಅವಧಿಯನ್ನು ವಿಸ್ತರಿಸಬೇಕು ಮತ್ತು ಪ್ರವಾಸ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಧಾರಾವಾಡ ವಿಭಾಗದ ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು.

ಈ ಮನವಿಯನ್ನು ಪರಿಗಣಿಸಿರುವ ಆಯುಕ್ತರು, ಬೆಳಗಾವಿ ವಿಭಾಗಕ್ಕೆ ಒಳಪಡುವ ಶಾಲೆಗಳಿಗೆ ಮಾತ್ರ ಪ್ರಸಕ್ತ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಅವಧಿಯನ್ನು ಜ.15ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರವಾಸ ಕೈಗೊಳ್ಳುವಂತೆ ಸೂಚಿಸಿದ್ದಾರೆ.