ಬೆಂಗಳೂರು ಖಾಸಗಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪ್ರಕಟಿಸುವಂತೆ ಶಿಕ್ಷಣ ಇಲಾಖೆಯು ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋತೆ ಹೊರಡಿಸಿ ನಿರ್ದೇಶನ ನೀಡಿದ್ದಾರೆ. ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2 (ಬಿ) ರಂತೆ ಎಲ್ಲ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ವೆಬ್‌ಸೈಟ್‌ನಲ್ಲಿ ಮತ್ತು ಶಾಲಾ ಸೂಚನಾ ಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ (ಸ್ಯಾಟ್ಸ್) ಸಾರ್ವಜನಿಕರು ಮತ್ತು ಪಾಲಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-1 ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.
ತಮ್ಮ ವ್ಯಾಪ್ತಿಯ ಯಾವುದೇ ಶಾಲೆಗಳು ನಿಯಮ ಉಲ್ಲಂಸಿರುವ ಬಗ್ಗೆ ದೂರುಗಳು ದಾಖಲಾಗಿದ್ದಲ್ಲಿ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012ರ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.