ನ್ಯೂಸ್

ಪಠ್ಯಪುಸ್ತಕ, ಸಮವಸ್ತ್ರ, ಶಾಲಾರಂಭದ ಸಿದ್ಧತೆಗಾಗಿ ಮೇ 3ರಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ: ಅಧಿಕಾರಿಗಳಿಗೆ ಏನೆಲ್ಲಾ ಸೂಚನೆ ಇದೆ?

ಬೆಂಗಳೂರು ಮುಂದಿನ ಶೈಕ್ಷಣಿಕ ವರ್ಷದ (2024-25) ಮಾರ್ಗಸೂಚಿ ಸಿದ್ಧಪಡಿಸುವುದು, ಸಮವಸ್ತ್ರ, ಪಠ್ಯಪುಸ್ತಕ ಸೇರಿ ಇನ್ನಿತರ ವಿಷಯಗಳ ಕುರಿತು ಚರ್ಚಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ 3ರಂದು ಪೂರ್ವಭಾವಿ ಸಭೆ ನಡೆಸುತ್ತಿದೆ.

ರಾಜ್ಯಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಅಭಿವೃದ್ದಿ ಪೂರಕ ಚಟುವಟಿಕೆಗಳು/ಕಾರ್ಯಕ್ರಮಗಳನ್ನು ಶೈಕ್ಷಣಿಕ ವರ್ಷದ ರಜೆ ದಿನಗಳೂ ಸೇರಿ ಸಮಗ್ರವಾಗಿ ತಿಂಗಳವಾರು ವೇಳಾಪಟ್ಟಿ ನಿಗದಿಪಡಿಸಲು ಈ ಸಭೆ ಪ್ರಮುಖ ಪಾತ್ರ ವಹಿಸಲಿದೆ.

ಮೇ 3ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ರಾಜ್ಯ ಯೋಜನಾ ನಿರ್ದೇಶಕರು, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಧಾರವಾಡ ಮತ್ತು ಕಲಬುರಗಿ ಆಯುಕ್ತರು, ಪಠ್ಯಪುಸ್ತಕ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು, ಪ್ರಧಾನಮಂತ್ರಿ ಪೋಷಣ ಶಕ್ತಿ ಅಭಿಯಾನ ನಿರ್ದೇಶಕರು ಸೇರಿ ಇಲಾಖೆ ನಿರ್ದೇಶಕರು ಭಾಗವಹಿಸಲಿದ್ದಾರೆ.