ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ

ಮೈಸೂರು: ಈವೆರೆಗ ಶಾಲೆಗಳಲ್ಲಿ ಮಕ್ಕಳಿಗೆ ವಾರಕ್ಕೆ 2 ದಿನ ಮಾತ್ರ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಆದರೆ ಪ್ರಗತಿಪರ ಕೈಗಾರಿಕಾ ಉದ್ಯಮಿಗಳಾದ ಅಜಿಮ್ ಪ್ರೇಮ್ ಜಿ ಸಿ.ಆರ್.ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ರೂ. ನೀಡಿದ್ದು, ಇದರಿಂದ 1 ರಿಂದ 10 ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆಯನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸೂಚನೆ ನೀಡಿದರು.

ಮಹಾರಾಜ ಪದವಿಪೂರ್ವ ಕಾಲೇನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ರಾಜ್ಯ ಸರ್ಕಾರದ ಪಿ.ಎಂ. ಪೋಷಣ್ -ಮಧ್ಯಾಹ್ನ ಉಪಹಾರ ಯೋಜನೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿಧ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ವಿಟಮಿನ್ ಮತ್ತು ಪ್ರೋಟೀನ್ ಮುಖ್ಯ, ಆದ್ದರಿಂದ ಮಕ್ಕಳಿಗೆ ಬಿಸಿ ಊಟದ ಜತೆ ಮೊಟ್ಟೆಯನ್ನು ನೀಡಲಾಗುತ್ತಿದೆ. ವಾರದಲ್ಲಿ 2 ದಿನ ಮೊಟ್ಟೆಯನ್ನು ನೀಡುತ್ತಾ ಬಂದಿದ್ದೇವೆ. ಸಿಆರ್‌ಎಫ್ ಫೌಂಡೇಶನ್ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹಿಂದಿನ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಹೇಳಿದಂತೆ, ರಾಜ್ಯದಲ್ಲಿ ಶೆ.88ರಷ್ಟು ಮಕ್ಕಳು ಮೊಟ್ಟೆಯನ್ನು ಪಡೆದರೆ ಇನ್ನು ಶೇ.8ರಷ್ಟು ಮಕ್ಕಳು ಬಾಳೆಹಣ್ಣು ಹಾಗೂ ಉಳಿದ ಶೆ.4ರಷ್ಟು ಮಕ್ಕಳು ಕಡಲೆ ಹಿಟ್ಟಿನ ಚಕ್ಕುಲಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.