ನ್ಯೂಸ್

ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕಾಸರಗೋಡು: ಕಣ್ಣೂರು ಜಿಲ್ಲೆಯ 36ನೇ ವಾರ್ಡ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತೃತೀಯ ಲಿಂಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೊಟ್ಟಡ ಸಮಾಜವಾದಿ ಕಾಲನಿಯಲ್ಲಿ ವಾಸಿಸುತ್ತಿರುವ ಕೆ.ಸ್ನೇಹಾ(38) ಮೃತರು. ಮಂಗಳವಾರ ಸಾಯಂಕಾಲ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಚೀರಾಡುತ್ತಿದ್ದರು. ನೆರೆಮನೆಯವರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಜೀವ ಉಳಿಸಲಾಗಲಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.