ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಯಿಂದ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Bengaluru - Political - Shivananda Tagadur

ಬೆಂಗಳೂರು:
ವಿಧಾನಪರಿಷತ್ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿಗೌಡ ಅವರು ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗ್‌ಟಿಗಳನ್ನು ಹಂಚುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ ಎಂದು ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದೆ.
ಖಾಸಗಿ ಕೊರಿಯರ್ ಏಜೆನ್ಸಿಯ ಗೋದಾಮಿನಲ್ಲಿ ಈ ಉಡುಗೊರೆಗಳನ್ನು ಶೇಖರಿಸಿ ಇಡಲಾಗಿದೆ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸುವಂತೆ ನಿಯೋಗ ಕೋರಿದೆ.
ಚುನಾವಣಾಧಿಕಾರಿ ಕಚೇರಿಯ ಬಳಿ ಗ್‌ಟಿ ಪ್ಯಾಕ್‌ಗಳನ್ನು ಪ್ರದರ್ಶನ ಮಾಡಿದ ಬಿಜೆಪಿ ನಿಯೋಗ,
ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ನಿಯೋಗದಲ್ಲಿ ಶಾಸಕ ಎಸ್.ಸುರೇಶ್ ಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.