ನ್ಯೂಸ್

ಅಮಿತ್​ ಶಾ ಅವರ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು | Amit Shah

ಮಹಾರಾಷ್ಟ್ರ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರ ಹೆಲಿಕಾಪ್ಟರ್​ಗಳನ್ನು ಮಾತ್ರ ಕೂಲಂಕುಶವಾಗಿ ಪರಿಶೀಲಿಸಲಾಗುತ್ತಿದೆ ಎಂಬ ಆರೋಪದ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರ ಹೆಲಿಕಾಪ್ಟರ್ ಮತ್ತು ಬ್ಯಾಗ್‌ಗಳನ್ನು ಚುನಾವಣಾಧಿಕಾರಿಗಳು ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಶುಕ್ರವಾರ ಪರಿಶೀಲಿಸಿದ್ದಾರೆ.

ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಆಯೋಗದ ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ಪರಿಶೀಲಿಸುತ್ತಿರುವ ವೀಡಿಯೊವನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಾಕಿರುವ ಬಗ್ಗೆ ತಿಳಿಸಿದ ಅವರು, ನಿಯಮಗಳನ್ನು ಅನುಸರಿಸುವ ಮೂಲಕ ನ್ಯಾಯಯುತ ಮತ್ತು ಆರೋಗ್ಯಕರ ಚುನಾವಣಾ ವ್ಯವಸ್ಥೆ ಮೇಲೆ ಬಿಜೆಪಿ ನಂಬಿಕೆ ಇಟ್ಟಿದೆ ಎಂದು ಹೇಳಿದರು.

ಗೌರವಾನ್ವಿತ ಚುನಾವಣಾ ಆಯೋಗದ ಎಲ್ಲಾ ನಿಯಮಗಳು ಅನುಸರಿಸುತ್ತವೆ. ನಾವೆಲ್ಲರೂ ಆರೋಗ್ಯಕರ ಚುನಾವಣಾ ವ್ಯವಸ್ಥೆಗೆ ಕೊಡುಗೆ ಮತ್ತು ಭಾರತವನ್ನು ವಿಶ್ವದ ಪ್ರಬಲ ಪ್ರಜಾಪ್ರಭುತ್ವವಾಗಿ ಇರಿಸುವಲ್ಲಿ ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಹೇಳಿದರು,(ಏಜೆನ್ಸೀಸ್​).