ನ್ಯೂಸ್

ದುಷ್ಕರ್ಮಿಗಳ ಅಟ್ಟಹಾಸ; ಗುಂಡೇಟಿಗೆ ಬಲಿಯಾದ ಹೆಣ್ಣಾನೆ

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಸುಮಾರು 18 ವರ್ಷದ ಹೆಣ್ಣಾನೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು

ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ ನಂತರ ಬಾಯಿ ನೋವಿನಿಂದ ಬಳಲುತ್ತಿದ್ದ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ ಬಣಗಾರ ಎಂಬ ಮಹಿಳೆಯ ಚಿತೆ ದಾಳಿ ಮಾಡಿತ್ತು. ಬಳಿಕ ಗ್ರಾಮದ ಬಳಿಯಿರುವ ಅಡಕೆ ತೋಟದಲ್ಲಿ ಚಿರತೆ ಮೃತ ದೇಹ ಪತ್ತೆಯಾಗಿದೆ.

ಇಂದು ಬೆಳಗ್ಗೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಮಹಿಳೆ ಮೇಲೆ‌ ದಾಳಿ ಮಾಡಿದೆ. ಗ್ರಾಮಸ್ಥರು ಚಿರತೆಯನ್ನು ಓಡಿಸುತ್ತಿದ್ದಂತೆ ಅಡಕೆ ತೋಟದಲ್ಲಿ ಕಣ್ಮರೆಯಾಗಿದೆ. ಸುಮಾರು ಒಂದು ಗಂಟೆಯ ಬಳಿಕ ಚಿರತೆಯ ಮೃತ ದೇಹ ಪತ್ತೆಯಾಗಿದೆ. ಬಾಯಿ ನೋವಿನಿಂದ ಬಳಲುತ್ತಿದ್ದ ಚಿರತೆ ಆಹಾರವಿಲ್ಲದೆ ನಿತ್ರಾಣಗೊಂಡು ಮೃತಪಟ್ಟಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.