ನ್ಯೂಸ್

ಜಿಲ್ಲಾ ಸಹಕಾರಿ ಬ್ಯಾಂಕ್​ ತೆರೆಯುವ ಚಿಂತನೆ; ಮಲ್ಲೇಶ ಕರಿಗಾರ

ರಾಣೆಬೆನ್ನೂರ: ರಾಜ್ಯ ಸರ್ಕಾರಿ ನೌಕರರ ಸಂಘಟನೆ ವತಿಯಿಂದ ಜಿಲ್ಲಾ ಸಹಕಾರಿ ಬ್ಯಾಂಕ್​ ತೆರಯುವ ಚಿಂತನೆಯಿದ್ದು ಅದನ್ನು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ತರಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಹೇಳಿದರು.

ಇಲ್ಲಿನ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ನಗರ ಹಾಗೂ ಗ್ರಾಮೀಣ ಪ್ರದೇಶದ 75 ಕ್ಕೂ ಅಧಿಕ ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಂಘದ ವಾಷಿರ್ಕ ಮಹಾ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕು ಸಂಘಗಳ ಸಹಯೋಗದೊಂದಿಗೆ ನೌಕರರಿಗಾಗಿ ಗೃಹ ಮಂಡಳಿ ರಚನೆ ಮಾಡುವ ಯೋಜನೆಯಿದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಸಂಘಟನೆಯೊಂದಿಗೆ ಕೈ ಜೋಡಿಸಬೇಕು. ನೌಕರರ ಸಂಘಟನೆ ವತಿಯಿಂದ ಅತಿಹೆಚ್ಚು ಅಂಕ ಪಡೆದ ತಾಲೂಕಿನ ಎಲ್ಲ ಪ್ರತಿಭಾವಂತ ವಿದ್ಯಾಥಿರ್ಗಳಿಗೆ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಕೆಂಚರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಶಿಡೇನೂರ, ತಾಲೂಕು ಅಧ್ಯಕ್ಷ ಸುರೇಶ ಕೋಟಿಹಾಳ, ಎಂ.ಸಿ. ಬಲ್ಲೂರ, ರುದ್ರೇಶ ಎ.ಸಿ., ಡಾ. ರಾಜು ಶಿರೂರ, ಬಸವನಗೌಡ ಪಾಟೀಲ, ಮಂಜುನಾಥ ಎಚ್​., ಎಂ.ಡಿ.ದ್ಯಾಮಣ್ಣನವರ, ಎಂ.ಎಂ. ಮಾಗನೂರ, ಗಣೇಶ ಕರ್ಜಗಿ, ಉಮೇಶ ಬಿ., ಸಿದ್ದೋಜಿರಾವ್​ ಸೂರ್ಯವಂಶಿ ಮತ್ತಿತರರು ಉಪಸ್ಥಿತರಿದ್ದರು.