ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ; ಭಯೋತ್ಪಾದಕ ಸಾವು| encounter

ಕುಲ್ಗಾಮ್‌: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಗುಡಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದೆ. ಇನ್ನೂ ಈ ದಾಳಿಯಲ್ಲಿ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದು, ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ದಕ್ಷಿಣ ಕಾಶ್ಮೀರದ ಗುಡಾರ್ ಅರಣ್ಯ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಮತ್ತು ಪ್ರಸ್ತುತ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್‌ನ ಸಿಬ್ಬಂದಿ ಪ್ರಸ್ತುತ ಜಂಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕುಲ್ಗಾಮ್‌ನ ಗುಡ್ಡಾರ್ ಅರಣ್ಯದಲ್ಲಿ ಎನ್‌ಕೌಂಟರ್ ಆರಂಭವಾಗಿದೆ.

(ಏಜೆನ್ಸೀಸ್)

ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಪ್ರಕಾರ, ಸೇನಾ ಜೆಸಿಒ ಒಬ್ಬರು ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದವು ಮತ್ತು ಅವರನ್ನು ಎದುರಿಸಲು ಪ್ರಯತ್ನಿಸಿದಾಗ, ಭಯೋತ್ಪಾದಕರು ಗುಂಡು ಹಾರಿಸಿದರು, ಈ ಸಂದರ್ಭದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು. ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಮತ್ತು ಒಬ್ಬ ಜೂನಿಯರ್ ಕಮಿಷನ್ಡ್ ಅಧಿಕಾರಿ ಗಾಯಗೊಂಡರು ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.