ನ್ಯೂಸ್

ಛತ್ತಿಸ್​ಘಡದಲ್ಲಿ 16 ಮಾವೋವಾದಿಗಳ ಎನ್​ಕೌಂಟರ್; ಇಬ್ಬರು ಯೋಧರಿಗೆ ಗಾಯ | Encounter

Encounter : ಛತ್ತಿಸ್​ಘಡದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ(ಮಾ.29) ರಂದು ನಡೆದ ಪೊಲೀಸ್​ ಎನ್​ಕೌಂಟರ್​ನಲ್ಲಿ 16 ಮಾವೋವಾದಿಗಳು ಬಲಿ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಎನ್​​ಕೌಂಟರ್​ನಲ್ಲಿ ಬಲಿಯಾದ 16 ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕೆಲಾಪೌರ್ಲ್​ ಪೊಲೀಸ್​ ಠಾಣೆಯ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಪೊಲೀಸರ ಮತ್ತು ಮಾವೋದಿಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ರಾತ್ರಿ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದು ಈ ವರ್ಷ ಎಡಪಂಥೀಯ ಉಗ್ರರ ಮೇಲೆ ನಡೆದ ಅತಿ ದೊಡ್ಡ ದಾಳಿಯಾಗಿದ್ದು, 2025 ರ ಸಾವಿನ ಸಂಖ್ಯೆ 81 ಕ್ಕೆ ತಲುಪಿದೆ.(ಏಜೆನ್ಸೀಸ್​)