ಗಡ್ಚಿರೋಲಿ: ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಇಂದು (ಆ.27) ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಪುರುಷ, ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡ್ಚಿರೋಲಿ-ನಾರಾಯಣಪುರ ಗಡಿಯಲ್ಲಿನ ಕೋಪರ್ಶಿ ಅರಣ್ಯ ಪ್ರದೇಶದಲ್ಲಿ 8 ಗಂಟೆಗಳ ಕಾಲ ಎನ್‌ಕೌಂಟರ್ ನಡೆಸಲಾಗಿದೆ. ಈ ದಾಳಿಯಲ್ಲಿ ಒಬ್ಬ ಪುರುಷ ಮತ್ತು ಮೂರು ಮಹಿಳೆಯರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ಶಸ್ತ್ರಾಸ್ತ್ರಗಳು, 1 ಎಸ್ಎಲ್ಆರ್ ರೈಫಲ್, 2 ಐಎನ್ಎಸ್ಎಎಸ್ ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೂಡ ಈ ಪ್ರದೇಶದಲ್ಲಿ ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗಡ್ಚಿರೋಲಿಯ ಎಸ್ಪಿ ನೀಲೋತ್ಪಾಲ್ ತಿಳಿಸಿದ್ದಾರೆ.
ನಕ್ಸಲರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ, ಗಡ್ಚಿರೋಲಿ ಪೊಲೀಸರ ಸಿ-60 ಕಮಾಂಡೋ ತಂಡವು ಕೋಪರ್ಶಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 'ಐರನ್ಮ್ಯಾನ್' ಪೂರ್ಣಗೊಳಿಸಿದ 'ಐಜಿಪಿ ಸಂದೀಪ್ ಪಾಟೀಲ್'ಗೆ ಅಭಿನಂದನೆ ಸಲ್ಲಿಸಿದ ಶಾಸಕ 'ಸುರೇಶ್ ಕುಮಾರ್'| igp
(ಏಜೆನ್ಸೀಸ್)
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯನ್ನು ಲೆಕ್ಕಿಸದೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ರಮೇಶ್ ನೇತೃತ್ವದ ತಂಡ ಇಂದು ಬೆಳಗ್ಗೆ ಕಾಡಿಗೆ ತಲುಪಿತು. ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಗುಂಡು ಹಾರಿಸಿದರು. ಹಾಗಾಗಿ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಮತ್ತು ಸುಮಾರು ಎಂಟು ಗಂಟೆಗಳ ಕಾಲ ಗುಂಡಿನ ಚಕಮಕಿ ಮುಂದುವರೆಯಿತು ಎಂದು ಹೇಳಲಾಗಿದೆ.