ನ್ಯೂಸ್

ಮಕ್ಕಳನ್ನು ಪ್ರೋತ್ಸಾಹಿಸಿದರೆ ಸಾಧನೆ ಮಾಡಲು ಸಹಕಾರಿ

ರಾಣೆಬೆನ್ನೂರ: ಮಕ್ಕಳಲ್ಲಿರುವ ಪ್ರತಿಭೆಯನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಅದು ಮಕ್ಕಳಿಗೆ ಮತ್ತಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್​ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.

ತಾಲೂಕಿನ ಮೇಡ್ಲೇರಿ ಗ್ರಾಮದ ಬೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಗ್ರಾಮ ಘಟಕ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕೆ ನಿರಂತರವಾಗಿರಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ ನಿಷ್ಠೆ ಮತ್ತು ನೈತಿಕತೆ ಇರಬೇಕು. ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ದೊರೆಯುತ್ತದೆ. ಜೊತೆಗೆ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.

ಕಸಾಪ ತಾಲೂಕು ಅಧ್ಯಕ್ಷ ಪ್ರಭಾಕರ ಶಿಗ್ಲಿ ಅಧ್ಯಕ್ಷತೆ ವಹಿಸಿದ್ದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಸಾಪ ಗ್ರಾಮ ಘಟಕದ ಅಧ್ಯಕ್ಷ ಮಾರುತಿ ತಳವಾರ, ಜಿಲ್ಲಾ ಗೌರವ ಕಾರ್ಯದಶಿರ್ ಬಿ.ಪಿ. ಶೀಡೆನೂರ, ಪ್ರಮುಖರಾದ ಸುಭಾಸ ಕುರುಬರ, ಅನ್ನರ್ಪೂಣ ಚವ್ಹಾಣ, ಡಾ. ಕಾಂತೇಶ ಅಂಬಿಗೇರ, ವಿರೇಶ ಜಂಬಗಿ, ರತ್ನಮ್ಮ ಎ.ಬಿ., ಸಣ್ಣಗುಡ್ಡಪ್ಪ ಕೂನಬೇವು, ನಿತ್ಯಾನಂದ ಕುಂದಾಪುರ, ಮಲ್ಲಿಕಾರ್ಜುನ ಸಾವಕ್ಕಳವರ, ಎಚ್​.ಎಚ್​. ಬಿಂಗೇರ, ಇಸ್ಮಾಯಿಲ್​ ಐರಣಿ, ಪರಶುರಾಮ ತಳವಾರ ಮತ್ತಿತರರು ಉಪಸ್ಥಿತರಿದ್ದರು.