ಬೆಂಗಳೂರು:
ಇಂಜಿನೀಯರಿಂಗ್ ಸೀಟ್ ಬ್ಲಾಕಿಂಗ್ ಪ್ರಕರಣದಲ್ಲಿ 12 ಜನರನ್ನು ಬಂದಿಸಲಾಗಿದ್ದು, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸೀಟ್ ಬ್ಲಾಕಿಂಗ್ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ತನಿಖೆ ನಡೆಸುವ ಸಲುವಾಗಿ ಎ್ಐಆರ್ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಸ್ಥೆಗಳ ವಿವರ ಕೋರಿದ್ದು, ಈಗಾಗಲೇ ಈ ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.