ನ್ಯೂಸ್

ಎಂಟೆತ್ತಿನವರ ಯುನಿವರ್ಸಿಟಿ ಬ್ಲೂ

ಪ್ರಶಾಂತ ಹೂಗಾರ

ಚಿಕ್ಕೋಡಿ: ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಎಜುಕೇಶನ್ ಸೊಸೈಟಿಯ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಬಿಎಸ್‌ಪಿಡಬ್ಲುೃ, ಎಂಎಸ್‌ಪಿಡಬ್ಲುೃ ಮಹಾವಿದ್ಯಾಲಯದ ಬಿಎಸ್‌ಪಿಡಬ್ಲುೃ ಪ್ರಥಮ ವರ್ಷದ ವಿದ್ಯಾರ್ಥಿ ವಿನಾಯಕ ಎಂಟೆತ್ತಿನವರ ಈಚೆಗೆ ಏರ್ಪಡಿಸಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ್-ಕಾಲೇಜುಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಯುನಿವರ್ಸಿಟಿ ಬ್ಲೂ ಆಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿ ಸಾಧನೆಗೆ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಸಹ ಸಂಸ್ಥಾಪಕಿ ಶಶಿಕಲಾ ಜೊಲ್ಲೆ, ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಬಸವಜ್ಯೋತಿ ಯೂತ್ ೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ಶರೀಷ ಕೇರೂರ, ಪ್ರಾಚಾರ್ಯ ಡಾ.ಅಪ್ಪಾಸಾಹೇಬ ಅಕ್ಕೋಳೆ ಹರ್ಷವ್ಯಕ್ತಪಡಿಸಿದ್ದಾರೆ.