ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್‌ನ ಮುಂದಾಳತ್ವದಲ್ಲಿ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಯುಪಿಎಸ್‌ಸಿ ಪರೀಕ್ಷಾ ಸಿದ್ಧತೆಗಾಗಿ ಉಚಿತವಾಗಿ ತರಬೇತಿ ಪ್ರವೇಶ ಪರೀಕ್ಷೆ ಭಾನುವಾರ ನಡೆಯಿತು.
ಮಂಗಳೂರು: ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್‌ನ ಮುಂದಾಳತ್ವದಲ್ಲಿ ಬೆಂಗಳೂರು ಮೂಲದ ಆರೋಹಿ ಫೌಂಡೇಶನ್ ವತಿಯಿಂದ ಯುಪಿಎಸ್‌ಸಿ ಪರೀಕ್ಷಾ ಸಿದ್ಧತೆಗಾಗಿ ಉಚಿತವಾಗಿ ತರಬೇತಿ ನಡೆಯಲಿದ್ದು, ಈ ನಿಟ್ಟಿನಲ್ಲಿ ತರಬೇತಿಗಾಗಿ ಪ್ರವೇಶ ಪರೀಕ್ಷೆ ಭಾನುವಾರ ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಮುಂಬೈ ಸೇರಿದಂತೆ ವಿವಿಧೆಡೆಯಿಂದ ಸುಮಾರು 139 ವಿದ್ಯಾರ್ಥಿಗಳು ತರಬೇತಿಗಾಗಿ ಪ್ರವೇಶ ಪರೀಕ್ಷೆ ಬರೆದರು.
ಪರೀಕ್ಷೆಯ ಬಳಿಕ ಆರೋಹಿ ಫೌಂಡೇಶನ್‌ನ ಟ್ರಸ್ಟಿ ಗಣಪತಿ ಹೆಗಡೆ ಅವರು ಪರೀಕ್ಷಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯುಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ಶಿಸ್ತು ಹಾಗೂ ಸರಿಯಾದ ಮಾರ್ಗದರ್ಶನ ಅತ್ಯಗತ್ಯವಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಯುಪಿಎಸ್‌ಸಿ ಪರೀಕ್ಷೆ ಸಿದ್ಧತೆಗಾಗಿ ಉಚಿತವಾಗಿ ತರಬೇತಿ ನೀಡಲಾಗುವುದು ಎಂದರು.
ಹಿಂದಿ ಪ್ರಚಾರ ಸಮಿತಿಯ ಅಧ್ಯಕ್ಷ ಡಾ.ಮುರಳೀಧರ ನಾಯಕ್, ಮಂಗಳೂರುವಿವಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಕೆ.ಮಾಧವ ಶುಭ ಹಾರೈಸಿದರು.ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ಚ.ನ.ಶಂಕರ್ ರಾವ್ ಅವರು ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಪರೀಕ್ಷೆಯ ಮೇಲುಸ್ತುವಾರಿ ವಹಿಸಿದ್ದರು.
ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್‌ನ ಸದಸ್ಯರಾದ ರಮೇಶ್ ಕೆ., ಡಾ.ಕೇಶವ ಬಂಗೇರ,ಕಾರ್ಯದರ್ಶಿ ಡಾ.ಲತಾ ರೈ, ಪ್ರೊ. ಹೇಮಲತಾ ಹಾಗೂ ಸಂಯೋಜಕಿ ಭಾವನಾ ಮತ್ತಿತರರು ಉಪಸ್ಥಿತರಿದ್ದರು.
ಶಾರದಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶರ ಡಾ.ಸೂರಜ್ ಪುರಾಣಿಕ್ ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಅವರು ಪರೀಕ್ಷೆ ಯಶಸ್ವಿಯಾಗಿ ನಡೆಯಲು ಸಹಕರಿಸಿದರು.