ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೀರು ಸರಬರಾಜು ನೌಕರರ ಸಂಘದ ಪದಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್ ಭೇಟಿ ನೀಡಿ ಬೆಂಬಲ ಸೂಚಿಸಿದರು.  
ನ್ಯೂಸ್

ನೌಕರರ ಹೋರಾಟಕ್ಕೆ ಈಶ್ವರಪ್ಪ ಬೆಂಬಲ

ಶಿವಮೊಗ್ಗ: ಉದ್ಯೋಗದ ಭದ್ರತೆ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಕೆಇಬಿ ವೃತ್ತದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಚೇರಿ ಎದುರು ನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘದ ಪದಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳಕ್ಕೆ ತೆರಳಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ಹೋರಾಟಕ್ಕೆ ಬಂಬಲ ಸೂಚಿಸಿದರು.

ನೌಕರರ ಜತೆಗೆ ಮಾತುಕತೆ ನಡೆಸಿದ ಅವರು, ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿವೆ. ಪಾಲಿಕೆಯಿಂದ ಅವುಗಳನ್ನು ಈಡೇರಿಸಬೇಕು. ಈ ಬಗ್ಗೆ ಪಾಲಿಕೆಯ ಹಿರಿಯ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸೋಣ ಎಂದು ತಿಳಿಸಿದರು. ಇದೇ ವೇಳೆ ನೀರು ಸರಬರಾಜು ಮಂಡಳಿ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಮಾತನಾಡಿದ ಈಶ್ವರಪ್ಪ, ನೌಕರರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ಮೋಹನ ಕುಮಾರ್, ಅಧ್ಯಕ್ಷ ಎಚ್.ಎನ್.ನಾಗರಾಜ್, ಪ್ರಮುಖರಾದ ರಘುರಾಮ್, ಡಿ.ಎನ್.ಕಿರಣ್ ಕುಮಾರ್, ಜೆ.ವಿನಯ್, ಎಲ್.ರಘು, ಆರ್.ಪರಮೇಶ್, ಎಲ್.ವಿನಾಯಕ ಮುಂತಾದವರಿದ್ದರು.