ನ್ಯೂಸ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ

Haveri - Kariyappa Aralikatti

ಹಾವೇರಿ: ಮಾ. 25ರಿಂದ ಏ. 6ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿಗಮದ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಹಾಗೂ ಬಸ್‌ಗಳ ಕಾರ್ಯಾಚರಣೆಯ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ವಿಭಾಗದ ಎಲ್ಲ ಚಾಲಕರು ಮತ್ತು ನಿರ್ವಾಹಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.