ದೇವದುರ್ಗ: ತಾಲೂಕಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ್ ನಾಯಕ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದರು. ಸಾಮಾಜಿಕ ಅನ್ಯಾಯದ ವಿರುದ್ಧ ನಡೆಸಲಾದ ಹೋರಾಟಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಹೋರಾಟಗಾರರನ್ನು ಹತ್ತಿಕ್ಕಲು ರಾಜಕೀಯ ಪಕ್ಷಗಳ ನಡೆಸಿದ ಷಡ್ಯಂತ್ರದಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿವೆ. ಎಸ್ಟಿ ಮೀಸಲು ದೇವದುರ್ಗ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸಂಬಂಧಿಕರಾಗಿರುವುದು ಸಹಜವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಹತ್ತಿರದ ಸಂಬಂಧಿಯಾಗಿದ್ದರೂ ಅವರ ವಿರುದ್ಧ ಹೋರಾಟ ಮಾಡುವೆ ಎಂದರು.