ಬಾಗಲಕೋಟೆ: ನಿಖಿಲ್ ಕುಮಾರಸ್ವಾಮಿ ಸೋತು ಮೂರು ವರ್ಷಗಳೇ ಕಳೆದಿವೆ. ಆದರೆ ಈಗ ಮಾತನಾಡಿ ಏನು ಪ್ರಯೋಜನ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲು ಗೆಲುವು ನಮ್ಮ ಕುಟುಂಬದಲ್ಲಿ ಎಲ್ಲವನ್ನೂ ನೋಡಿದ್ದೇವೆ, ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ, ನಮಗೆ ಅದು ಸಾಮಾನ್ಯ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ದೇವೇಗೌಡ ಹಾಗೂ ನಿಖಿಲ್ ಕುಮಾರಸ್ವಾಮಿ ಸೋಲಲು ಕುಟುಂಬ ರಾಜಕಾರಣವೇ ಕಾರಣ ಎಂದು ಎಂಎಲ್ಸಿ ಮರಿತಿಬ್ಬೇಗೌಡ ಆರೋಪಿಸಿದ್ದರು.
ನಾವು ಹುಟ್ಟಿದಾಗಿನಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ, ಅವರಿಂದ ನಾವೇನು ಕಲಿಯಬೇಕಿಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)